Free Sewing Machine: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಪ್ರಾರಂಭ.! ಕೂಡಲೇ ನಿಮ್ಮ ಅರ್ಜಿಯನ್ನು ಹೀಗೆ ಸಲ್ಲಿಸಿ!
Free Sewing Machine Scheme 2024: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭವಾಗಿವೆ. ಈ ಒಂದು ಯೋಜನೆ ಮುಖಾಂತರ ಮಹಿಳೆಯರು ತಮ್ಮ ಕುಟುಂಬದ ನಿವಾರಣೆ ಮತ್ತು ತಮ್ಮ ಆರ್ಥಿಕತೆಯನ್ನು ಸಹಾಯಕ್ಕಾಗಿ ಈ ಒಂದು ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ನೀಡುವ ಮೂಲಕ ಬಹಳಷ್ಟು ಮಹಿಳೆಯರಿಗೆ ಸಹಾಯವಾಗಿದೆ. ಈ ವರ್ಷ ಕೂಡ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಕರೆಯಲಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮತ್ತು ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಹತೆಗಳನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ಸಂಪೂರ್ಣವಾಗಿ ನೀಡಲಾಗಿದೆ, ಆದ್ದರಿಂದ ಸಂಪೂರ್ಣವಾಗಿ ಓದಿ ನಂತರದಲ್ಲಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ.
ಉಚಿತ ಹೊಲಿಗೆ ಯಂತ್ರ ಪಡೆಯಲು ಇರಬೇಕಾದ ಅರ್ಹತೆಗಳು:
ಕುಟುಂಬದ ವಾರ್ಷಿಕ ಆದಾಯವು ಗ್ರಾಮ ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಆದಾಯ 98,000 ಒಳಗಡೆ ಇರಬೇಕು, ಅದೇ ರೀತಿಯಾಗಿ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಜನರ ವಾರ್ಷಿಕ ಆದಾಯವು 1,20,000 ಒಳಗಡೆ ಇರಬೇಕು.
ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ಮಿತಿಯಲ್ಲಿ ಇರಬೇಕು.
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಇರುವ ಫಲಾನುಭವಿಗಳು ಹಿಂದುಳಿದ ವರ್ಗಗಳ ಪ್ರವರ್ಗ ಒಂದು, 2A, 3A ಹಾಗೂ 3B ವರ್ಗಕ್ಕೆ ಸೇರಿದವರಾಗಿರಬೇಕು.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಮೇಲೆ ನೀಡಿರುವ ಅರ್ಹತೆಗಳನ್ನು ಫಲಾನುಭವಿ ಹೊಂದಿದ ನಂತರ ಅಗಸ್ಟ್ 31ರ ಒಳಗಾಗಿ ಈ ಕೆಳಗಡೆ ನೀಡಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅರ್ಜಿದಾರರ ಫೋಟೋ
- ಜನ್ಮ ದಿನಾಂಕ ಇರುವ ಯಾವುದಾದರು ಒಂದು ದಾಖಲೆ
- ಶೈಕ್ಷಣಿಕ ಅರ್ಹತೆಯ ಪ್ರಮಾಣಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮತದಾರರ ಗುರುತಿನ ಚೀಟಿ
- ಗ್ರಾಮ ಪಂಚಾಯಿತಿ ಅಥವಾ ಪಂಚಾಯತ್ ರಾಜ್ ಅಧಿಕಾರಿಗಳಿಂದ ಹೊಲಿಗೆ ಮಾಡುತ್ತಿರುವ ದೃಢೀಕರಣ ಪ್ರಮಾಣ ಪತ್ರ
- ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರಿದ್ದರೆ ಉಚಿತ ಅವರಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವುದಿಲ್ಲ
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ:
ಈ ಕೆಳಗಡೆ ನೀಡಿರುವ ಲಿಂಕ್ ಮುಖಾಂತರ ನೀವು ಮೇಲೆ ನೀಡಿರುವ ಅಗತ್ಯ ದಾಖಲೆಗಳೊಂದಿಗೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://sevasindhu.karnataka.gov.in/Sevasindhu/Kannada?ReturnUrl=%2F ಇಲ್ಲವಾದಲ್ಲಿ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಮೇಲೆ ನೀಡಿರುವ ದಾಖಲೆಗಳೊಂದಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.