Gruhalakshmi: ಗೃಹಲಕ್ಷ್ಮಿ ಯೋಜನೆ 12ನೇ ಮತ್ತು 13ನೇ ಕಂತಿನ ಹಣ ಬಿಡುಗಡೆ.! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಘೋಷಣೆ!
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಲವು ಜನರಿಗೆ ಉಪಯೋಗವಾಗುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಒಂದು ಯೋಜನೆ ಯಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ ಈ ಒಂದು ಯೋಜನೆ ಅಡಿಯಲ್ಲಿ ರಾಜ್ಯದ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಂಡು ತಮ್ಮ ಆರ್ಥಿಕತೆ ಮತ್ತು ತಮ್ಮ ವ್ಯಾಪಾರಗಳನ್ನು ಅಭಿವೃದ್ಧಿಗೊಳಿಸಲು ಸಹಾಯಕವಾಗಿದೆ.
ಗೃಹಲಕ್ಷ್ಮಿ 12ನೇ ಮತ್ತು 13ನೇ ಕಂತಿನ ಹಣ ಬಗ್ಗೆ ಮತ್ತು ಈ ಒಂದು ಯೋಜನೆ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ, ಇದರ ಸಂಪೂರ್ಣ ಮಾಹಿತಿ ಕೆಳ ಭಾಗದಲ್ಲಿ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಮಹತ್ವದ ಘೋಷಣೆ.!
ನಗರಗಳಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರುವ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಮತ್ತು ಗೃಹಲಕ್ಷ್ಮಿ ಯೋಜನೆಯ 12ನೇ ಮತ್ತು 13ನೇ ಕಂತಿನ ಹಣ ಬಿಡುಗಡೆಗೆ ಸ್ವಲ್ಪ ತಾಂತ್ರಿಕ ದೋಷದಿಂದ ಬಿಡುಗಡೆ ಆಗಿಲ್ಲ, ಇನ್ನೂ ಕೆಲವೇ ದಿನಗಳಲ್ಲಿ ಮಹಿಳೆಯರಿಗೆ ಒಟ್ಟಿಗೆ 4,000 ಹಣ ಬಂದು ತಲುಪಲಿದೆ ಎಂದು ಸಚಿವ ತಿಳಿಸಿದ್ದಾರೆ.