HESCOM Recruitment: ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ವಿದ್ಯುತ್ ಇಲಾಖೆಯಲ್ಲಿ 338 ಹುದ್ದೆಗಳಿಗೆ ಅರ್ಜಿ ಆಹ್ವಾನ!

HESCOM Recruitment: ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ವಿದ್ಯುತ್ ಇಲಾಖೆಯಲ್ಲಿ 338 ಹುದ್ದೆಗಳಿಗೆ ಅರ್ಜಿ ಆಹ್ವಾನ!

HESCOM Recruitment 2024: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆ, ಹೊಸದಾಗಿ ವಿದ್ಯುತ್ ಇಲಾಖೆಯಲ್ಲಿ 338 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು. ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಮುನ್ನ ಆಯ್ಕೆ ವಿಧಾನ, ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಪ್ರಮುಖ ದಿನಾಂಕಗಳು, ಹುದ್ದೆಗಳ ವಿವರ ಮತ್ತು ಇನ್ನಿತರ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ. ಆದ್ದರಿಂದ ಸಂಪೂರ್ಣವಾಗಿ ಓದಿ ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ.

  • ಇಲಾಖೆ ಹೆಸರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಇಲಾಖೆ ಲಿಮಿಟೆಡ್
  • 338 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಹುದ್ದೆಗಳ ಹೆಸರು: ಅಪ್ರಂಟಿಸ್
  • ಈ ಒಂದು ಹುದ್ದೆಗೆ ನೀವು ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
  • ಈ ಒಂದು ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹುದ್ದೆಗಳ ವಿವರ:

  • ಪದವೀಧರ ಅಪ್ರಂಟಿಸ್: 200
  • ಡಿಪ್ಲೋಮಾ ಅಪ್ರೆಂಟಿಸ್: 138

ಸಂಬಳದ ವಿವರಣೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 8,000 ದಿಂದ 9,000/- ಸಂಬಳವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಇಲಾಖೆಯ ಪ್ರಕಾರ ವಯಸ್ಸಿನ ಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ: ಈ ಒಂದು ಹುದ್ದೆಗೆ ಯಾವುದೇ ಅರ್ಜಿ ಶುಲ್ಕವನ್ನು ನೀಡಿರುವುದಿಲ್ಲ.

ಶೈಕ್ಷಣಿಕ ಅರ್ಹತೆ:

  • ಪದವೀಧರ ಅಪ್ರೆಂಟಿಸ್: ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗನಲ್ಲಿ B.E/B.TECH
  • ಡಿಪ್ಲೋಮಾ ಅಪ್ರೆಂಟಿಸ್: ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗನಲ್ಲಿ Diploma

ಆಯ್ಕೆ ವಿಧಾನ: ಮೆರಿಟ್ ಲಿಸ್ಟ್ ನಡೆಸಿ ಮೆರಿಟ್ ನಲ್ಲಿ ಬಂದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ದಾಖಲೆ ಪರಿಶೀಲನೆ ಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ.

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/08/2024

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://nats.education.gov.in/

Leave a Comment