Union Bank Recruitment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ.! 500 ಹುದ್ದೆಗಳಿಗೆ ಕೂಡಲೇ ಹೀಗೆ ಅರ್ಜಿ ಸಲ್ಲಿಸಿ!
Union Bank Recruitment 2024: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ ಯೂನಿಯನ್ ಬ್ಯಾಂಕ್ ನಲ್ಲಿ 500 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಹುದ್ದೆಗಳಿಗೆ ಯಾವ ರೀತಿಯಾಗಿ ಆಯ್ಕೆ ಮಾಡುತ್ತಾರೆ ಮತ್ತು ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ವಯೋಮಿತಿ ಮತ್ತು ಹುದ್ದೆಯ ಪ್ರಮುಖ ದಿನಾಂಕ ಹಾಗೂ ಇನ್ನಿತರ ಮಾಹಿತಿ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ. ಆದ್ದರಿಂದ ಸಂಪೂರ್ಣವಾಗಿ ಓದಿ ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
- ಇಲಾಖೆ ಹೆಸರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
- 500 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
- ಹುದ್ದೆಗಳ ಹೆಸರು: ಅಪ್ರೆಂಟಿಸ್
- ಈ ಒಂದು ಹುದ್ದೆಗೆ ನೀವು ಭಾರತದಲ್ಲೆಡೆ ಕಾರ್ಯನಿರ್ವಹಿಸಬೇಕಾಗುತ್ತದೆ.
- ಈ ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸಂಬಳದ ವಿವರಣೆ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ₹15,000 ಸಂಬಳ ನೀಡಲಾಗುತ್ತದೆ.
ವಯಸ್ಸಿನ ಮಿತಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಗರಿಷ್ಠ 28 ವಯಸ್ಸು ಮೀರಬಾರದು
ವಯಸ್ಸಿನ ಸಡಿಲಿಕೆ: OBC ಅಭ್ಯರ್ಥಿಗಳಿಗೆ 3 ವರ್ಷ, SC, ST ಅಭ್ಯರ್ಥಿಗಳಿಗೆ 5 ವರ್ಷ, PWBD ಅಭ್ಯರ್ಥಿಗಳಿಗೆ 10 ವರ್ಷ.
ಅರ್ಜಿ ಶುಲ್ಕ:
- OBC ಅಭ್ಯರ್ಥಿಗಳಿಗೆ: ₹800
- PWBD ಅಭ್ಯರ್ಥಿಗಳಿಗೆ: ₹600
- SC, ST ಅಭ್ಯರ್ಥಿಗಳಿಗೆ: ₹400
ಶೈಕ್ಷಣಿಕ ಅರ್ಹತೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಶ್ವವಿದ್ಯಾಲಯ ದಿಂದ ಪದವಿಯನ್ನು ಪೂರ್ಣಗೊಳಿಸಬೇಕು.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ನಡೆಸಿ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-08-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-ಸೆಪ್ಟೆಂಬರ್-2024
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://nats.education.gov.in/